28-05-2023 ರಂದು ನಡೆಯಲಿರುವ ತುಮಕೂರಿನ ಭಗವಾನ್ 1008 ಶ್ರೀ ಮಹಾವೀರ ಸ್ವಾಮಿಯವರ ಸಮವಸರಣದ ಮಂಡಲ ಪೂಜಾ ಮಹೋತ್ಸವ.
ಸಮವಸರಣದ ಮಂಡಲಪೂಜಾ ಮಹೋತ್ಸವವನ್ನು ಪರಮಪೂಜ್ಯ ಶ್ರೀ ಲಕ್ಷ್ಮೀಸೇನಾ ಭಟ್ಟಾರಕ ಮಹಾಸ್ವಾಮಿಗಳವರ ಪಾವನ ಸಾನಿಧ್ಯ ಹಾಗೂ ಮಾರ್ಗದರ್ಶನದಲ್ಲಿ ದಿನಾಂಕ: 28/05/2023 ರ ಭಾನುವಾರದಂದು ಆಯೋಜಿಸಲಾಗಿದೆ. ಅಂದು ಬೆಳಗಗೆ 11.30 ಕ್ಕೆ ಸಭಾ ಕಾರ್ಯಕ್ರಮ ಏರ್ಪಡಿಲಾಗಿದ್ದು ಪರಮಪೂಜ್ಯ ಆಚಾರ್ಯ ಶ್ರೀ 108 ಪಾವನಕೀರ್ತಿ ಮಹಾರಾಜ್ ರವರು , ಪರಮ ಪೂಜ್ಯ ಶ್ರೀ ಶ್ರೀ ಲಕ್ಷ್ಮೀಸೇನಾ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮಿಗಳು ಶ್ರೀ ಕ್ಷೇತ್ರ ಸಿಂಹನಗದ್ದೆ, ನರಸಿಂಹರಾಜಪುರ. ಇವರ ಪಾವನ ಸಾನಿಧ್ಯ ಮತ್ತು ಆಶೀರ್ವಾದದಲ್ಲಿ ಶ್ರೀ ದಿಗಂಬರ ಜೈನ ಶ್ರೀ ಪಾರ್ಶ್ವನಾಥ ಸ್ವಾಮಿ ಜಿನಮಂದಿರ ತುಮಕೂರು ಇಲ್ಲಿನ ಅಧ್ಯಕ್ಷರಾದ ಸನ್ಮಾನ್ಯ ಶ್ರೀ ಎಸ್ .ಜೆ ನಾಗರಾಜ್ ರವರ ಅಧ್ಯಕ್ಷತೆಯೊಂದಿಗೆ ನಡೆಯಲಿದ್ದು ಮುಖ್ಯ ಅತಿಥಿಗಳಾಗಿ ತುಮಕೂರು ಗ್ರಾಮಾಂತರ ಕ್ಷೇತ್ರದ ಶಾಸಕರಾದ ಸನ್ಮಾನ್ಯ ಶ್ರೀ ಬಿ. ಸುರೇಶ್ ಗೌಡರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಮದ್ಯಾಹ್ನ 1.30 ಕ್ಕೆ ಶ್ರೀ ಸಮವಸರಣದಲ್ಲಿ ಚತುರ್ಮುಖ ಶ್ರೀ ಜಿನಭಗವಂತನಿಗೆ 216 ಕಳಸಗಳ ಅಭಿಷೇಕ ಪೂಜೆ, ಮಹಾಮಂಗಳಾರತಿ ಏರ್ಪಡಿಲಾಗಿದ್ದು ಈ ಕಾರ್ಯಕ್ರಮಗಳಲ್ಲಿ ಸಧರ್ಮ ಬಂಧುಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಪುಣ್ಯ ಭಾಗಿಗಳಾಗಿ. ಕಾರ್ಯಕ್ರಮವು ಜ್ವಾಲಾಮಾಲಾ ನ್ಯೂಸ್ ಚಾನೆಲ್ ನಲ್ಲಿ ನೇರಪ್ರಸಾರವಾಗಲಿದ್ದು ಅತಿ ಹೆಚ್ದಿನ ಸಂಖ್ಯೆಯಲ್ಲಿ ವೀಕ್ಷಿಸಿ ಪ್ರೋತ್ಸಾಹಿಸಿ.














