ಜೈ ಜಿನೇಂದ್ರ ಜ್ವಾಲಮಾಲ ಡಾಟ್ ನ್ಯೂಸ್ ಗೆ ಸ್ವಾಗತ :-
ಸಧರ್ಮ ಬಂಧುಗಳೇ, ಉಡುಪಿ ಜಿಲ್ಲೆಯ ಕಾರ್ಕಳದಲ್ಲಿನ ಆನೆಕೆರೆ ಚತುರ್ಮುಖ ಕೆರೆಬಸದಿ ಧಾಮಸಂಪ್ರೋಕ್ಷಣಾ ಪೂರ್ವಕ ಜಿನ ಬಿಂಬ ಪ್ರತಿಷ್ಠಾಪನೆ ಮತ್ತು ಮೇಗಿನ ನೆಲೆಯಲ್ಲಿ ಪಂಚಕಲ್ಯಾಣ ಪೂರ್ವಕ 1008 ಭಗವಾನ್ ಶ್ರೀ ಪಾರ್ಶ್ವನಾಥಸ್ವಾಮಿಯ ಬಿಂಬ ಪ್ರತಿಷ್ಠ ಮಹೋತ್ಸವದ ಆತ್ಮಿಯ ಆಹ್ವಾನ.
ದಿನಾಂಕ 18-1-2024 ರಿಂದ 22-01-2024 ರವರೆಗೆ ನಡೆಯಲಿರವ ಮಹೋತ್ಸವ ಪರಮ ಪೂಜ್ಯ ಯುಗಳ ಮುನಿ ಮಹಾರಾಜರಾದ ಮುನಿ ಶ್ರೀ 108 ಅಮೋಘಕೀರ್ತಿ ಮಹಾರಾಜರು, ಮುನಿ ಶ್ರೀ 108 ಅಮರ ಕೀರ್ತಿ ಮುನಿ ಮಹಾರಾಜರುಗಳ ಪಾವನ ಸಾನಿಧ್ಯ. ರಾಜಗುರು ಧ್ಯಾನಯೋಗಿ ಸ್ವಸ್ತಿಶ್ರೀ ಲಲಿತಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮೀಜಿಗಳವರ ಶ್ರೀ ಜೈನ ಮಠ ದಾನಶಾಲೆ ಕಾರ್ಕಳ ಇವರ ನೇತೃತ್ವದಲ್ಲಿ ಮತ್ತು ಸಮಸ್ತ ಭಟ್ಟಾರಕರ ಪಾವನ ಸಾನಿಧ್ಯದಲ್ಲಿ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಪೂಜ್ಯ ರಾಜರ್ಷಿ ಡಾ|| ಡಿ ವೀರೇಂದ್ರ ಹೆಗ್ಗಡೆಯವರ ಮತ್ತು ಮಾತೃಶ್ರೀ ಹೇಮಾವತಿ ವಿ. ಹೆಗ್ಗಡೆಯವರ ಮಾರ್ಗದರ್ಶನದಲ್ಲಿ ಮತ್ತು ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರಾದ ಡಾ|| ಎಂ ಎನ್ ರಾಜೇಂದ್ರ ಕುಮಾರ್ ರವರ ಹಿರಿತನದಲ್ಲಿ ಊರಪರ ಊರ ಸಹೃದಯಿ ಧರ್ಮಾಭಿಮಾನಿ ಸಧರ್ಮ ಬಂಧುಗಳ ಸಹಕಾರದೊಂದಿಗೆ ಆನೆಕೆರೆ ಬಸದಿಯ ಧಾಮಸಂಪ್ರೋಕ್ಷಣ ಮಹೋತ್ಸವ ಹಾಗೂ ಪಂಚಕಲ್ಯಾಣ ಮಹೋತ್ಸವವನ್ನು ನೂತನ ಶಿಲಾಮಯ ಜಿನ ಮಂದಿರದಲ್ಲಿ ಆಗಮೋಕ್ತ ವಿಧಿ ವಿಧಾನಗಳೊಂದಿಗೆ ಸಂಪನ್ನಗೊಳ್ಳಲಿರುವುದು.
ಈ ಬೃಹತ್ ಮಹೋತ್ಸವದ ಉದ್ಘಾಟನೆಯನ್ನು ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ರಾಜರ್ಷಿ ಡಾ|| ಡಿ ವೀರೇಂದ್ರ ಹೆಗ್ಗಡೆಯವರ ಅಧ್ಯಕ್ಷತೆಯಲ್ಲಿ ಕರ್ನಾಟಕ ಸರ್ಕಾರದ ಮಾನ್ಯ ರಾಜ್ಯಪಾಲರಾದ ಗೌರವಾನ್ವಿತ ಶ್ರೀ ಥಾವರ್ ಚಂದ್ ಗೆಹ್ಲೋಟ್ ರವರಿಂದ ನಡೆಯಲ್ಲಿದ್ದು ಕಾರ್ಕಳ ವಿಧಾನ ಸಭಾ ಕ್ಷೇತ್ರ ಮಾಜಿ ಸಚಿವರು ಮತ್ತು ಶಾಸಕರಾದ ಶ್ರೀ ವಿ ಸುನೀಲ್ ಕುಮಾರ್ ರವರು ಸ್ಮರಣ ಸಂಚಿಕೆ ಬಿಡುಗಡೆಗೊಳಿಸಲಿದ್ದಾರೆ. ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ, ಉಡುಪಿ ಜಿಲ್ಲೆಯ ಉಸ್ತುವಾರಿ ಸಚಿವೆ ಶ್ರೀಮತಿ ಲಕ್ಷ್ಮಿ ಹೆಬ್ಬಾಳ್ಕರ್, ಕರ್ನಾಟಕ ಸರ್ಕಾರದ ಯೋಜನೆ ಮತ್ತು ಕಾರ್ಯಕ್ರಮ ಸಂಯೋಜನೆ ಸಚಿವರಾದ ಶ್ರೀ ಡಿ ಸುಧಾಕರ್ ರವರುಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿರಲಿದ್ದಾರೆ.
ಕರ್ನಾಟಕ ಭಾರತೀಯ ಜನತಾ ಪಾರ್ಟಿ ಅಧ್ಯಕ್ಷರು ಹಾಗೂ ಶಾಸಕರಾದ ಶ್ರೀ ಬಿ ವೈ ವಿಜಯೇಂದ್ರ ರವರು, ಸುವರ್ಣ ನ್ಯೂಸ್ ಖ್ಯಾತ ಪತ್ರಕರ್ತರಾದ ಅಜಿತ್ ಹನುಮಕ್ಕನವರ್ ಹೀಗೆ ಪ್ರತಿ ದಿನ ನಡೆಯಲಿರುವ ಧಾರ್ಮಿಕ ವಿಧಾನಗಳು ಹಾಗೂ ಸಭೆಯಲ್ಲಿ ವಿವಿಧ ಕ್ಷೇತ್ರದ ಗಣ್ಯರು, ಸಾಧಕರು, ಹಿರಿಯರು ಹಾಗೂ ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಅನೇಕ ಸಾಂಸ್ಕೃತಿಕ ಕಾರ್ಯಕ್ರಮಗಳು ಕೂಡ ವೈಭವವಾಗಿ ಮೇಳೈಸಲಿದೆ. ಹೆಚ್ಚಿನ ಸಂಖ್ಯೆಯಲ್ಲಿ ತಾವುಗಳೆಲ್ಲರು ಭಾಗಿಯಾಗಿ ಧರ್ಮಲಾಭ ಪಡೆದುಕೊಳ್ಳಿ. ಈ ಕಾರ್ಯಕ್ರಮವು ಜ್ವಾಲಮಾಲ ಡಾಟ್ ನ್ಯೂಸ್ ನಲ್ಲಿ ನೇರಪ್ರಸಾರಗೊಳ್ಳಲಿದ್ದು ಹೆಚ್ಚಿನ ಸಂಖ್ಯೆಯಲ್ಲಿ ವೀಕ್ಷಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿ.
ಇಂತಹ ಅದ್ಬುತ ಕಾರ್ಯಕ್ರಮಗಳ ವೀಕ್ಷಣೆಗಾಗಿ ವೀಕ್ಷಿಸುತ್ತಿರಿ.
ಜ್ವಾಲಮಾಲ ಡಾಟ್ ನ್ಯೂಸ್














