ಶ್ರೀಮತಿ ಅನನ್ಯ ಭಟ್ ರವರು ಜಿನಭಜನಾ ಸ್ಪರ್ಧೆಯ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಈ ಭಜನೆಯ ಕಾರ್ಯಕ್ರಮವು ತುಂಬಾ ಚೆನ್ನಾಗಿ ಮೂಡಿಬಂದಿತು. 2 ದಿನದಿಂದ ಈ ಕಾರ್ಯಕ್ರಮವನ್ನು ಸುಂದರವಾಗಿ ಮೂಡಿಬರಲು ಕಾರಣರಾದ ಇಲ್ಲಿರುವ ಪ್ರತಿಯೊಬ್ಬರಿಗೂ ನನ್ನ ನಮನಗಳನ್ನು ತಿಳಿಸುತ್ತೇನೆ ಎಂದು ಹಲವು ಜನಪ್ರಿಯ ಗಾಯನಗಳನ್ನು ಹಾಡುವುದರ ಮೂಲಕ ಪ್ರೇಕ್ಷಕರನ್ನು ರಂಜಿಸಿದರು. ನಂತರ ಅವರನ್ನು ಶಾಲು ಹೊದಿಸಿ ಗೌರವಿಸಲಾಯಿತು.